ವಿಜಯಪುರ: ವಿಜಯಪುರ ಬ್ರೇಕಿಂಗ್: ಒಂದು ಬೈಕ್, ಒಂದು ಕಾರಿನಲ್ಲಿ ಆಗಮಿಸಿದ ದುಷ್ಕರ್ಮಿಗಳು ರೌಡಿಶೀಟರ್ ಹೈದರ್ ಅಲಿ ನದಾಫ್ನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಹೌದು..! ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ಬೈಕ್ ಹಾಗೂ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ರೌಡಿಶೀಟರ್ ಹೈದರ್ನ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇನ್ನೂ ಹೈದರ್ ಗುಂಡಿನ ದಾಳಿ ತಪ್ಪಿಸಿಕೊಳ್ಳಲು ಪರಾರಿಗೆ ಯತ್ನಿಸಿದ್ದಾರೆ. ಆದ್ರೇ, ಹೈದರ್ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾನೆ. ಇದನ್ನೆ ಬಂಡವಾಳ ಮಾಡಿಕೊಂಡ ದುಷ್ಕರ್ಮಿಗಳು ಗುಂಡಿನ ದಾಳಿಗೈದು ಹತ್ಯೆಗೈದಿದ್ದಾರೆ. ತಕ್ಷಣವೇ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇದನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದುಕೊಂಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.