ವಿಜಯಪುರ: ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಇವಿಎಂ ಮಶೀನ್ ಹಾಗೂ ವಿವಿಪ್ಯಾಟ್ ಮಶೀನ್ಗಳನ್ನ ಗ್ರಾಮಸ್ಥರು ಬುಧವಾರ ಒಡೆದು ಹಾಕಿದ್ದಾರೆ. ಕಾಯ್ದಿರಿಸಲಾಗಿದ್ದ ಮತಯಂತ್ರಗಳು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರ್ತಿದ್ದಾಗ ಈ ಘಟನೆ ನಡೆದಿದೆ. ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ. ಅಲ್ಲದೇ, ಅಧಿಕಾರಿಗಳ ಕಾರನ್ನು ಗ್ರಾಮಸ್ಥರು ಜಖಂಗೊಳಿಸಿದ್ದಾರೆ. ಸಿಬ್ಬಂದಿಗಳಿಗೂ ಥಳಿಸಿದ್ದಾರೆ. ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ, ತಪ್ಪುಭಾವಿಸಿ ಮತಯಂತ್ರ ಒಡೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಲ್ಲದೇ, ಮಸಬಿನಾಳ ಗ್ರಾಮದಲ್ಲಿ ಮತಯಂತ್ರಗಳು ಪೀಸ್ ಪೀಸ್ ಪ್ರಕರಣದಲ್ಲಿ 25-30 ಜನರನ್ನು ಪೊಲೀಸ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಮಾಹಿತಿ ನೀಡಿದರು. ಎವಿಎಂ, ವಿವಿಪ್ಯಾಟ್ ಹಾನಿ ಮಾಡಿದ್ದಾರೆ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರು ಕ್ರಮ ಕೈಗೊಳ್ಳುತ್ತೇವೆ. ಕಾರು, ಮಸೀನ್ ಹಾನಿ ಆಗಿದೆ. ಇಂತಹ ಕೃತ್ಯದಲ್ಲಿ ಭಾಗವಹಿಸಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು. ಇನ್ನೂ ಹಾನಿಯಾದ ಮತಯಂತ್ರಗಳು ರಿಸರ್ವ್ ಮತಯಂತ್ರಗಳು. ಸೆಕ್ಟರ್ ಅಧಿಕಾರಿ ವಾಹನದಲ್ಲಿ ಕೊಂಡೊಯ್ಯುವಾಗ ಜನರು ತಪ್ಪು ಭಾವಿಸಿ ಒಡೆದು ಹಾಕಿದ್ದಾರೆ ಘಟನೆಯಿಂದ ಮತದಾನಕ್ಕೆ ಯಾವುದೇ ಅಡ್ಡಿಯಾಗಿಲ್ಲ. ಮತದಾನಕ್ಕೆ ಯಾವುದೇ ತೊಂದರೆಯಾಗಿಲ್ಲ.
ಮತದಾನ ಸರಳವಾಗಿ ಶಾಂತಿಯುತವಾಗಿ ನಡೆಯುತ್ತಿವೆ ಎಂದ ಡಿಸಿ ದಾನಮ್ಮನವರ ಹೇಳಿದರು.