ವಿಜಯಪುರ: ಕ್ರೂಜರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ವಜ್ರ ಹನುಮಾನ ಗೇಟ್ ಹತ್ತಿರ ಶುಕ್ರವಾರ ನಡೆದಿದೆ. ಮೃತಪಟ್ಟಿರುವ ಬೈಕ್ ಸವಾರ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎರಡು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.