ವಿಜಯಪುರ: ವಿಧಾನ ಸಭೆ ಚುನಾವಣೆ ಹಿನ್ನೆಲೆ ವಿಜಯಪುರದ ಎಂಟು ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆಗೆ ಡಿಸಿ ದಾನಮ್ಮನವರ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ಒಫನ್ ಮಾಡಲಾಯಿತು. ವಿಜಯಪುರ ನಗರದ ಸೈನಿಕ ಶಾಲಾ ಆವರಣದಲ್ಲಿರುವ ಭದ್ರತಾ ಕೊಠಡಿ ಬಾಗಿಲನ್ನು ಮಾಧ್ಯಮಗಳು, ಅಭ್ಯರ್ಥಿಗಳ ಏಜೆಂಟ್ ರ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆಗೆಯಲಾಯಿತು. ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ, ಎಸ್ ಪಿ ಎಚ್.ಡಿ. ಆನಂದಕುಮಾರ, ಸ್ವೀಪ್ ಅಧಿಕಾರಿ ರಾಹುಲ್ ಶಿಂಧೆ ಸಮ್ಮುಖದಲ್ಲಿ ಭದ್ರತಾ ಕೊಠಡಿ ಓಪನ್ ಮಾಡಲಾಯಿತು. ಸ್ಥಳದಲ್ಲಿಯೇ ಮುದ್ದೇಬಿಹಾಳ ಬಿಜೆಪಿ ಅಭ್ಯರ್ಥಿ ಎ.ಎಸ್. ಪಾಟೀಲ ನಡಹಳ್ಳಿ ಇದ್ದರು.