ವಿಜಯಪುರ: ಬಸವನಬಾಗೇಬಾಡಿ ಕಾಂಗ್ರೆಸ್
ಶಾಸಕ ಶಿವಾನಂದ್ ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು
ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ಒತ್ತಾಯಿಸಿದರು.
ವಿಜಯಪುರ ನಗರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಾನಂದ ಪಾಟೀಲ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯಲ್ಲಿ ಹಲವಾರು ನೀರಾವರಿ ಯೋಜನೆಗಳು ಅರ್ಧಕ್ಕೆ ನಿಂತಿವೆ. ಆ ಎಲ್ಲ ನೀರಾವರಿ ಕಾರ್ಯಗಳನ್ನು ಪೂರ್ಣಗೊಳಿಸಬೇಕಾದರೆ ಶಿವಾನಂದ ಪಾಟೀಲ್ ಅವರಿಂದ ಮಾತ್ರ ಸಾಧ್ಯ ಎಂದರು. ಪ್ರತಿಯೊಂದು ಹಳ್ಳಿಗಳಿಗೆ ಉತ್ತಮವಾದಂತ ರಸ್ತೆ ಸಂಪರ್ಕ, ಕುಡಿಯುವ ನೀರಿನ ಸೌಲಭ್ಯಕ್ಕೆ ಆದ್ಯತೆ ನೀಡಿದ ಶಾಸಕ ಶಿವಾನಂದ ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದರು.