K1N ಡೆಸ್ಕ್: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಸುಮಾರು 5 ಗಂಟೆಗಳ ಚರ್ಚೆ ನಡೆಸಿ ಸಿಎಂ ಡಿಸಿಎಂ ಸೇರಿ 10 ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.