ಹುಬ್ಬಳ್ಳಿ: ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಾರೆ ಎನ್ನುವುದು ಗೊತ್ತಿದೆ. ಅವರ ಅಧಿಕಾರ ಇದೆ ಏನ್ ಮಾಡ್ತಾರೆ ನೊಡೋಣ. ಆದ್ರೆ ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯ ಇದ್ದರೆ,ನಾವು ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ನಿವಾಸದಲ್ಲಿಂದು ಮಾತನಾಡಿದ ಅವರು, ಸಾರ್ವಜನಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಏನೇ ಅನ್ಯಾಯ ಆದರೂ ನಾವು ಹೋರಾಟ ಮಾಡಲು ಸಿದ್ಧ ಎಂದರು.
ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಾರೆ. ಸಾರ್ವಜನಿಕರಿಗೆ ಅನ್ಯಾಯವಾದರೇ ಕಾನೂನಾತ್ಮಕವಾಗಿ, ರಾಜಕೀಯವಾಗಿ ನಾವು ಹೋರಾಟ ಮಾಡುತ್ತೇವೆ. ಅಧಿಕಾರ ಬಂದಾಗ ಶ್ವೇಚ್ಚಾಚಾರವಾಗಿ ಎಲ್ಲವನ್ನು ಬದಲಾವಣೆ ಮಾಡುತ್ತೇವೆ ಎನ್ನುವುದು ದುರಹಂಕಾರದ ಮಾತು. ಇದು ರಿವರ್ಸ್ ಗೇರ್ ಸರ್ಕಾರ. ಅವರ ಗ್ಯಾರಂಟಿಯಲ್ಲೂ ರೀವರ್ಸ್ ಹೋಗ್ತೀದಾರೆ. ನಾವು ಮಾಡಿದ ಜನಪರ ಕಾನೂನಿನಲ್ಲಿ ರೀವರ್ಸ್ ಹೋಗ್ತೀದಾರೆ. ಇದರ ಪರಿಣಾಮ ಜನರಿಗೆ ಕೂಡಲೇ ಗೊತ್ತಾಗಿದೆ. ಇಷ್ಟು ಬೇಗ ಸರ್ಕಾರ, ಸೇಡಿನ ಕ್ರಮ ಆಗ್ತಿದೆ. ರೀವರ್ಸ್ ಗೇರ್ ಸರ್ಕಾರ ಅಷ್ಟೇ ಅಲ್ಲ ಇದು ಸೇಡಿನ ಕ್ರಮ ಮಾಡುತ್ತಿದೆ ಎಂದು ಹರಿಯ್ದಾರು.