ಧಾರವಾಡ: ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ನವಲೂರ (28) ಕೊಲೆಯಾಗಿರುವ ಯುವಕ. ದುಷ್ಕರ್ಮಿಗಳು ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈದಿದ್ದಾರೆ. ತೋಟದ ಮನೆಯಲ್ಲಿ ಮಲಗಿದ್ದ ಯುವಕನನ್ನು ಕೊಲೆ ಮಾಡಿರುವ ದುಷ್ಟರು, ಇದೇ 7ರಂದು ಹಸೆಮಣೆ ಏರಬೇಕಿದ್ದ ಯುವಕನನ್ನು ಕೊಲೆ ಮಾಡಿದ್ದಾರೆ. ತಾವರಗೇರೆ ಗ್ರಾಮದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಹಸೆಮಣೆ ಏರಬೇಕಿದ್ದ ಯುವಕ ಕೊಲೆಯಾಗಿದ್ದಾನೆ. ಮಧ್ಯರಾತ್ರಿ ಕೊಲೆ ಮಾಡಿ ಕಿರಾತಕರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.