ವಿಜಯಪುರ: ಚಕ್ರವರ್ತಿ ಸೂಲಿಬೆಲೆ ಗೆ ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದ ವಿಚಾರಕ್ಕೆ ಸಚಿವ ಎಂಬಿ ಪಾಟೀಲ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟರ್ ನಲ್ಲಿ ಎಂಬಿ ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯತ್ನಾಳ, ಇದು ತಾಲಿಬಾನ್ ಅಲ್ಲ. ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕೆ ಇದು ತಾಲಿಬಾನ್ ಅಲ್ಲ, ಕರ್ನಾಟಕ ಎನ್ನುವುದನ್ನ ಎಂಬಿ ಪಾಟೀಲ್ ಮರೆಯಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ. Fir ಮಾಡಸ್ತಿವಿ, ಜೈಲಿಗೆ ಕಳಿಸ್ತೀವಿ ಪದೇ ಪದೇ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರಾ.? ಎಂದು ಯತ್ನಾಳ ಪ್ರಶ್ನಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಂತ್ರಿಗಳು intolerant ಆಗಬಾರದು ಎಂದು ಯತ್ನಾಳ ಟ್ವೀಟ್ ಮಾಡಿದ್ದಾರೆ.