ವಿಜಯಪುರ: ಅಪಘಾತದಲ್ಲಿ ಗಾಯಗೊಂಡಿದ್ದ ಸಾಹಿತಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿರುವ ಘಟನೆ ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ನಡೆದಿದೆ. 40 ವರ್ಷದ ರಾಜೇಂದ್ರಕುಮಾರ ಬಿರಾದಾರ ಮೃತಪಟ್ಟಿರುವ ದುರ್ದೈವಿ. ಇನ್ನೂ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ನೀರಿನ ಟ್ಯಾಂಕ್ನಲ್ಲಿ ಬಿದ್ದು ಗಾಯಗೊಂಡಿದರು. ಆದ್ರೇ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://karnataka1news.com/wp-content/uploads/2023/06/IMG-20230607-WA0038-1024x576.jpg)