ಧಾರವಾಡ: ಖಾಸಗಿ ಬಸ್ ಹಾಗೂ ಕ್ರೂಸರ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕ್ರೂಸರ್ನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳು ಎಲ್ಲಿಯವರು ಹಾಗೂ ಎಲ್ಲಿಂದ ಎಲ್ಲಿಗೆ ಹೊರಟಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.