ವಿಜಯಪುರ: ದಲಿತ ಸಾಹಿತ್ಯ ಪರಿಷತ್ತಿನ 25ನೇ ಬೆಳ್ಳಿ ಹಬ್ಬ ಹಿನ್ನೆಲೆ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಅರ್ಜುನ ಗೊಳಸಂಗಿ ಹೇಳಿದರು. ವಿಜಯಪುರ ನಗರದಲ್ಲಿ ರವಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 29 ಹಾಗೂ 30ರಂದು ಈ ಸಮ್ಮೇಳನ ನಗರದ ಕಂದಗಲ್ ಹಣಮಂತರಾಯ್ ರಂಗಮಂದಿರದಲ್ಲಿ ನಡೆಯಲಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಎಚ್.ಟಿ. ಪೋತೆ ಆಯ್ಕೆ ಮಾಡಲಾಗಿದೆ. ಎರಡು ದಿನಗಳ ಕಾಲ ಪ್ರಬುದ್ಧ ಭಾರತ ಕುರಿತು ಉಪನ್ಯಾಸ, ಸಂವಾದ ನಡೆಯಲಿದೆ ಎಂದರು.