ವಿಜಯಪುರ: ಆಟೋ ಹಾಗೂ ಗೂಡ್ಸ್ ವಾಹನದ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಘಟನೆ ವಿಜಯಪುರ ತಾಲ್ಲೂಕಿನ ನಾಗಠಾಣ ಗ್ರಾಮದ ಬಳಿ ಮಂಗಳವಾರ ನಡೆದಿದೆ. ಇನ್ನೂ ಅಪಘಾತದಲ್ಲಿ ಎರಡು ವಾಹನಗಳು ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ಅಪಘಾತದಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.