ವಿಜಯಪುರ: ಆಕಸ್ಮಿಕ ಬೆಂಕಿ ಅವಘಡದಿಂದ ಮನೆಯೊಂದು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಿಕ್ಕಬೆವನೂರು ಗ್ರಾಮದಲ್ಲಿ ನಡೆದಿದೆ. ಕಾಂತಪ್ಪ ಮೇಲಿನಮನೆ ಎಂಬುವರ ಮನೆ ಭಸ್ಮವಾಗಿದೆ. ಮನೆಯಲ್ಲಿದ್ದ ನಗದು, ಚಿನ್ನ ಸೇರಿದಂತೆ ಸುಮಾರು 5 ಲಕ್ಷದ ವಿವಿಧ ವಸ್ತುಗಳು ಹಾನಿಯಾಗಿದೆ. ಇನ್ನೂ ಹೊತ್ತಿ ಉರಿದ ಮನೆಯ ವಿಡಿಯೋವನ್ನು ಸ್ಥಳೀಯರ ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.