ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೆ ಮಗನೋರ್ವ ಹತ್ಯೆಗೈದಿರುವ ಘಟನೆ ವಿಜಯಪುರದ ವೆಂಕಟೇಶ ನಗರದಲ್ಲಿ ಮಂಗಳವಾರ ನಡೆದಿದೆ. ರಮೇಶ ಕೂಡಿಗನೂರ ಹತ್ಯೆಯಾಗಿರುವ ದುರ್ದೈವಿ. ಇನ್ನು ಪುತ್ರ ಅಮೀತ್ ಕೂಡಿಗನೂರ ಹತ್ಯೆಗೈದಿರುವ ಆರೋಪಿ. ರಮೇಶ ಮಲಗಿದ ವೇಳೆ ಅಮೀತ್ ಹತ್ಯೆಗೈದು ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.