ವಿಜಯಪುರ: ಯುವಕ ನೇಣಿಗೆ ಶರಣಾಗಿರುವ ಘಟನೆ ವಿಜಯಪುರದ ಶಿವಗಿರಿ ಬಳಿ ನಡೆದಿದೆ. 28 ವರ್ಷದ ಲೋಹಿತ್ ಸಕ್ರೇಣ್ಣವರ ಮೃತಪಟ್ಟಿರುವ ದುರ್ದೈವಿ. ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹಗ್ಗದಿಂದ ಮರಕ್ಕೆ ನೇಣು ಬಿಗಿದುಕೊಂಡು ಲೋಹಿತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.