ವಿಜಯಪುರ: 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿ ಬೇಧಿಯಿಂದ ಅಸ್ವಸ್ಥಗೊಂಡಿರುವ ಘಟನೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿ ನಡೆದಿದೆ. ರಕ್ಕಸಗಿ ಗ್ರಾಮದ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಅಡುಗೆಯಲ್ಲಿ ಹಲ್ಲಿ ಬಿದಿದ್ದು ತಿಳಿಯದೆ ಆಹಾರ ಸೇವಿಸಿದ್ದಾರೆ. ಇದರಿಂದ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರು ತಾಲೂಕಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದಾರೆ. ಇದೇ ವೇಳೆ ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು.