ವಿಜಯಪುರ\Vijaypur: ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ಡಿಕೆ ಶಿವಕುಮಾರ್ ಯಾವ ಕಾಲಕ್ಕೂ ಸಿಎಂ ಆಗಲ್ಲ. ಇದೀಗ್ ಡಿಕೆಶಿ ಸೂಪರ್ ಸಿಎಂ ಆಗಿದ್ದಾರೆ ಎಂದರು. ಇನ್ನೂ ಸಿಎಂ ಸಿದ್ದರಾಮಯ್ಯಗೆ ಬಾಳ್ ನೋವು ಇದೆ ಎಂದು ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದರು. ಕಾಂಗ್ರೆಸ್ನ ಕೊನೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ. ಇದೀಗ್ ಸುಮ್ಮನೆ ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಆದ್ರೇ, ಆಡಳಿತ ಮಾತ್ರ ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ. ಆರು ತಿಂಗಳು ಆಗ್ಲಿ, ಐದು ವರ್ಷ ಆಗ್ಲಿ ಸಿಎಂ ಸಿದ್ದರಾಮಯ್ಯ ಅವರೇ ಸಿಎಂ ಇರುತ್ತಾರೆ ಎಂದರು.