ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಬೈಪಾಸ್ನಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ತಾರಿಹಾಳ ಬ್ರಿಡ್ಜ್ ಬಳಿ ನಡೆದಿದೆ. ಕೊಲ್ಲಾಪುರದಿಂದ ಸರಕು ಹೇರಿಕೊಂಡು ಬರುತ್ತಿದ್ದ ಲಾರಿ ಹಾಗೂ ಹಾವೇರಿಯಿಂದ ಮುಂಬೈಗೆ ಸರಕು ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಈ ಅಪಘಾತ ನಡೆದಿದ್ದು, ಬೇರೆ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಇಬ್ಬರು ಲಾರಿ ಚಾಲಕರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಾಡಲಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಘಟನೆಯ ಮಾಹಿತಿ ತಿಳಿಯುತ್ತಿದ್ದ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.