ಉತ್ತರ ಕನ್ನಡ: ಬೈಕ್ ಹಾಗೂ ಲೈಲ್ಯಾಂಡ್ ಗೂಡ್ಸ್ ವಾಹನದ ನಡುವೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ನಲ್ಲಿದ್ದ ಮೂವರ ಪೈಕಿ ಓರ್ವ ಗಂಭೀರವಾಗಿ ಗಾಯಗೊಂಡು, ಇಬ್ಬರಿಗೆ ಸಣ್ಣಪುಟ್ಟ ಗಾಯಾಳು ಆಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತ್ಯಾಗಲಿ ಸಮೀಪ ನಡೆದಿದೆ. ಸಲ್ಮಾನ್, ನಾಗರಾಜ್ ಮಾದರ, ಉಮೇಶ ಮಾದರ ಗಾಯಗೊಂಡಿದ್ದಾರೆ. ಈ ಪೈಕಿ ಸಲ್ಮಾನ್ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಉಮೇಶ ಹಾಗೂ ನಾಗರಾಜ್ ಅವರಿಗೆ ಸಿದ್ದಾಪುರದ ಶಿರಸಿ ಪಂಡಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.