ವಿಜಯಪುರ: ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮುಳವಾಡ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಮೇಲಿದ್ದ ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ಬೈಕ್ ಸವಾರರು ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದವನ ಕಾಲು ಮುರಿತ, ಹಿಂಬದಿ ಸವಾರ ಮಹಿಳೆ ತಲೆಗೆ ಪೆಟ್ಟು, ಜೊತೆಗಿದ್ದ ಸವಾರ ಬಾಲಕನಿಗೂ ಗಾಯ ಆಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.