ವಿಜಯಪುರ: ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕಾಸಿರಾಯಗೌಡ ಬಿರಾದಾರ ಭಾಜನರಾಗಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 9 ರಿಂದ 12ರ ವರೆಗೂ ಕೃಷಿ ಮೇಳೆ ನಡೆಯಲಿದೆ. ಸೆಪ್ಟೆಂಬರ್ 9 ರಂದು ನಡೆಯುವ ಕೃಷಿ ಮೇಳ ಕಾರ್ಯಕ್ರಮದಲ್ಲಿ ಬಿರಾದಾರ ಅವರಿಗೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲಿದ್ದಾರೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ ಅವರು ಬಿರಾದಾರ ಅವರನ್ನು ಸನ್ಮಾನಿಸಲಿದ್ದಾರೆ. ಇದರೊಂದಿಗೆ ರೈತರಿಂದ ರೈತರಿಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೃಷಿ ವಿವಿಯಂದ ಮನವಿ ನೀಡಿದ್ದಾರೆ.