ವಿಜಯಪುರ: ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ವಿಜಯಪುರ ನಗರದ ಅಲ್ಅಮೀನ್ ಎದುರು ನಡೆದಿದೆ. ಇನ್ನೂ ಅಪಘಾತದಲ್ಲಿ ಲಾರಿ ಸಂಪೂರ್ಣವಾಗಿ ಜಖಂಗೊಂಡಿದೆ. ಅಲ್ಲದೇ, ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಚಾಲಕನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.