ವಿಜಯಪುರ: ಸೆ.25ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರುಕಾ ಕಾರ್ಯಕ್ರಮ ನಡೆಯುವ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರಕ್ಕೆ ಭೇಟಿ ನೀಡಿ ಸಿದ್ಧತೆ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕಾರ್ಯಕ್ರಮವನ್ನು ಸುಸೂತ್ರವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ, ವಿಜಯಪುರದ ಉಪ ವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ, ಇಂಡಿ ಉಪವಿಭಾಗಾಧಿಕಾರಿಗಳಾದ ಅಬೀದ್ ಗದ್ಯಾಳ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ, ವಿಜಯಪುರ ನಗರದ ಡಿವೈಎಸ್ ಬಸವರಾಜ್ ಎಲಿಗಾರ,ಎನ್ ಐಸಿ ಅಧಿಕಾರಿ ಶಿವಾನಂದ ಗೂಗವಾಡ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.