ವಿಜಯಪುರ: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ವಿಜಯಪುರ ನಗರದ ಗಣಪತಿ ಗಲ್ಲಿಯಲ್ಲಿ ನಡೆದಿದೆ.
ಸಾಯಿ ಗಣೇಶ ಕಮ್ಯುನಿಕೇಷನ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಕಂಪ್ಯೂಟರ್, ಝೆರಾಕ್ಷ ಮಷೀನ್ ಸೇರಿದಂತೆ ವಿವಿಧ ವಸ್ತುಗಳು ಭಸ್ಮ ಆಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸಿದರು. ವಿಜಯಪುರ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.