ವಿಜಯಪುರ: ಸಿಎಂ ಇಬ್ರಾಹಿಂ ಜೆಡಿಎಸ್ ಬಿಡೋದಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಜಿ.ಟಿ. ದೇವೆಗೌಡ ಹೇಳಿದರು. ವಿಜಯಪುರ ನಗರದಲ್ಲಿ ಮಾಧ್ಯಮ ಎದುರು ಮಾತನಾಡಿದ ಅವರು, ಬಿಜೆಪಿ ಜೊತೆಗೆ ಹೋಗಲು ಇಬ್ರಾಹಿಂ ವಿರೋಧವಿಲ್ಲ. ಅವರೇ ಮುಂದೆ ನಿಂತು ನನ್ನ ಅಧ್ಯಕ್ಷ ಸ್ಥಾನ ಅನೌನ್ಸ್ ಮಾಡಿದ್ದಾರೆ, ನೀವೆ ನೋಡಿದ್ದೀರಿ, ಸಿ.ಎಂ ಇಬ್ರಾಹಿಂರದ್ದು ಈಗ ಏನು ಚರ್ಚೆ ಇಲ್ಲ. ಮುಂದೆ ಒಟ್ಟಾಗಿ ಹೇಗೆ ಹೋಗಬೇಕು ಅನ್ನೋದು ಇಬ್ರಾಹಿಂ ಸಲಹೆ ಇದೆ. ದೊಡ್ಡ ಗೌಡರ ಜೊತೆಗೆ ಸಲಹೆ ಹಂಚಿಕೊಂಡಿದ್ದಾರೆ. ಬಿಜೆಪಿ ಜೊತೆಗೆ ಎಷ್ಟು ಸೀಟ್ ಹಂಚಿಕೆಯಾಗಬೇಕು. ಮುಂದೆ ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಸಲಹೆ ಇಬ್ರಾಹಿಂರದ್ದು ಇದೆ. ಬಿಜೆಪಿ ಜೊತೆ ಹೋಗಲು ಯಾವುದೆ ವಿರೋಧವಿಲ್ಲ ಅನ್ನೋದನ್ನು ಇಬ್ರಾಹಿಂ ವ್ಯಕ್ತಪಡೆಸಿದ್ದಾರೆ ಎಂದರು.
ಶಾಸಕರ ಅನುದಾನ ಕಡಿತ, ಪ್ರತಿಭಟನೆ ವಿಚಾರಕ್ಕೆ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ಶಾಸಕ ಕಾಗೆ ಹಾಗೂ ಬಿ ಆರ್ ಪಾಟೀಲ್ ತಮ್ಮ ಅಸಮಧಾನ ಹೊರ ಹಾಕಿದ್ದಾರೆ. ಭೀಕರವಾದ ಬರಗಾದಲ್ಲು ಸರ್ಕಾರ ರೈತರ ಕಡೆಗೆ ನೋಡ್ತಿಲ್ಲ. ರೈತರಿಗೆ ನೀಡಬೇಕಾದ ಅನುದಾನ ನೀಡ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆ ಅನಿಸ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಜನರಿಗೆ ಕೊರಗು ಉಂಟಾಗಿದೆ. ಕಾಂಗ್ರೆಸ್ ತಂದು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಮನದಟ್ಟಾಗಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಬೇಕಿದೆ. ಇದಕ್ಕಾಗಿ ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋಗಬೇಕು. ಮುಂದೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ದೇಶಕ್ಕೆ ಅಗತ್ಯವಾಗಿದೆ. ಅವರನ್ನ ಉಳಿಸುವ ನಿರ್ಣಯ ಮಾಡಿದ್ದೇವೆ ಎಂದರು.