ವಿಜಯಪುರ/Vijaypur: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗುಡಿ ಅಹಿರಸಂಗ ರಸ್ತೆಯಲ್ಲಿ ನಡೆದಿದೆ. ಸೂರ್ಯಕಾಂತ ಗೌಡಗಾಂವ ಹಾಗೂ ಸೋಹೇಲ್ ಕಲಬುರಗಿ ಬಂಧಿತ ಆರೋಪಿಗಳು. ಆರೋಪಿಗಳು ಟಾಟಾ ಎಸಿ ವಾಹನದಲ್ಲಿ 450 ಕೆಜಿ ಅಕ್ಕಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಅಕ್ಕಿ, ವಾಹನ ಜಪ್ತಿಗೈದಿದ್ದಾರೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.