ವಿಜಯಪುರ: ಪತ್ರೆಶ ಶೆಡ್ಡ್ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ, ಸಾಗಾಟ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಅಳ್ಳೊಳ್ಳಿ ಬಂಧಿತ ಆರೋಪಿಗ. ಇನ್ನು ಸಂಜು ಝಳಕಿ ಹಾಗೂ ರಾಹುಲ್ ಪವಾರ ಪರಾರಿಯಾಗಿದ್ದಾರೆ. ಆರೋಪಿಗಳಿಂದ 539 ಕೆಜಿ ಅಕ್ಕಿ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಅಕ್ಕಿ ಜಪ್ತಿಗೈದಿದ್ದಾರೆ. ಈ ಕುರಿತು ಹೊರ್ತಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.