ವಿಜಯಪುರ: ಗ್ಯಾಸ್ ಕಟರ್ ನಿಂದ ಎಟಿಎಂ ಮಷಿನ್ ಕತ್ತರಿಸಿ ನಗದು ಕಳ್ಳತನಗೈದು ಕಳ್ಳರು ಪರಾರಿಯಾಗಿರುವ ಘಟನೆ ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದಲ್ಲಿ ನಡೆದಿದೆ. ಇಂಡಿಯಾ ಒನ್ ಎಟಿಎಂನಲ್ಲಿ ಕಳ್ಳರ ಕೈಚಳಕ ತೋರಿಸಿ 3 ಲಕ್ಷಕ್ಕೂ ಅಧಿಕ ಹಣ ಕಳ್ಳತನಗೈದು ಪರಾರಿಯಾಗಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎಟಿಎಂನ ಸಿಸಿ ಕ್ಯಾಮರಾಗೆ ಕಲರ್ ಸ್ಪ್ರೇ ಮಾಡಿ ಕಳ್ಳರು ಕಳ್ಳತನ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.