ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಲಾರಿಯೊಂದು ನೆಲಕ್ಕುರುಳಿದ ಘಟನೆ ಹುಬ್ಬಳ್ಳಿಯ ಗಬ್ಬೂರ ರಿಂಗ್ ರೋಡ್ನಲ್ಲಿ ನಡೆದಿದೆ. ಲಾರಿ ಚಾಲಕ ಹೈವೇ ರೋಡ್ನಿಂದ ರಿಂಗ್ ರೋಡ್ಗೆ ಹೊಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ನೆಲಕ್ಕುರುಳಿದೆ. ಚಾಲಕ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ.