ವಿಜಯಪುರ: ರಸ್ತೆ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ನಡೆದಿದೆ. ತಾಳಿಕೋಟೆಯಿಂದ ಮುದ್ದೇಬಿಹಾಳಗೆ ಹೋಗುವಾಗ ಹುಲಗಬಾಲ್ ಕ್ರಾಸ್ ಹತ್ತಿರ ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿದೆ. ಇದರಿಂದ
ತುಂಬಗಿ ಗ್ರಾಮದ ಮೆಹಬೂಬ್ ನದಾಫ್ 35, ಹುಸೇನ ಜಮಾದಾರ್ 38 ಮೃತಪಟ್ಟಿರುವ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.