ಹುಬ್ಬಳ್ಳಿ: ಏಕಾಏಕಿ ಶಾರ್ಟ್ ಸರ್ಕ್ಯೂಟ್ನಿಂದ ಸ್ಕ್ರ್ಯಾಪ್ ಗೋದಾಮಿಗೆ ಬೆಂಕಿ ತಗುಲಿದ ಘಟನೆ ಹುಬ್ಬಳ್ಳಿಯ ತಿರುಮಲಕೊಪ್ಪದಲ್ಲಿ ನಡೆದಿದೆ. ಮಂಜುನಾಥ ಹುಬ್ಬಳ್ಳಿ ಎಂಬುವರಿಗೆ ಸೇರಿದ ಗೋದಾಮು, ಧಗ ಧಗನೇ ಹೊತ್ತಿ ಉರಿಯುತ್ತಿದೆ. ಈ ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಇನ್ನು ಬೆಂಕಿ ತಗುಲಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ತಿಳಿಸಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದರು. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.