ವಿಜಯಪುರ: ಕಬ್ಬು ಸಾಗಾಟ ಮಾಡುವ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಎಚ್ ಎಚ್ ಸಂಗಾಪೂರ ಕ್ರಾಸ್ ಬಳಿ ನಡೆದಿದೆ. ಮೃತ ಬೈಕ್ ಸವಾರರು ಬಾಗಲಕೋಟೆ ಜಿಲ್ಲೆ ಮಹಾಲಿಂಗಪೂರ ಮೂಲದವರು ಎಂದು ಗುರುತಿಸಲಾಗಿದೆ. ಆದ್ರೇ, ಮೃತರ ಹೆಸರು ವಿಳಾಸ ತಿಳಿದು ಬಂದಿಲ್ಲ. ವೇಗವಾಗಿ ಬಂದ್ ಬೈಕ್ ಕಬ್ಬು ಸಾಗಾಟ ಮಾಡುವ ಟ್ರ್ಯಾಕ್ಟರ್ ಗೆ ಡಿಕ್ಕಿಯಾಗಿದೆ. ಇದರಿಂದ ಇಬ್ಬರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.