ವಿಜಯಪುರ: ಡಿಸೆಂಬರ್ 30ಕ್ಕೆ ವಿಜಯಪುರ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬರುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ ಕೂಚಬಾಳ್ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆದ್ಮೇಲೆ ಪ್ರಥಮ ಬಾರಿಗೆ ಜಿಲ್ಲೆಗೆ ಬರುತ್ತಿದ್ದಾರೆ. ಅದಕ್ಕಾಗಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತದನಂತರ ಸಂಜೆಗೆ ಲಿ.ಸಿದ್ಧೇಶ್ವರ ಶ್ರೀಗಳ ಆಶ್ರಮಕ್ಕೆ ಭೇಟಿ ನೀಡುತ್ತಾರೆ. ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕು ಎಂದು ಮನವಿ ಮಾಡಿದರು.