ವಿಜಯಪುರ: ಬೈಕ್ ಹಾಗೂ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್ ಬಳಿ ಮಂಗಳವಾರ ನಡೆದಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟಿರುವ ಬೈಕ್ ಸವಾರ ಹೆಸರು ಲಭ್ಯವಾಗಿಲ್ಲ. ಅಪಘಾತಕ್ಕೆ ಎರಡು ವಾಹನಗಳ ಅತಿವೇಗವೆ ಕಾರಣ ಎಂದು ಪೊಲೀಸ್ ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.