ಕಲಬುರಗಿ: ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಅಸುನೀಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದಲ್ಲಿ ನಡೆದಿದೆ
ಸಿದ್ದಲಿಂಗಯ್ಯ ಹಿರೇಮಠ (40) ಸಂಕೇತ (7) ಸಾವನ್ನಪ್ಪಿದ್ದಾರೆ. ನಾಗಮ್ಮ ಹಿರೇಮಠ , ಅಂಕಿತಾ ಹಿರೇಮಠ ಗಾಯಗೊಂಡವರು. ಮೃತರು ಕಲಬುರಗಿ ಜಿಲ್ಲೆಯ ಕಮಕನೂರ್ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಎಳ್ಳು ಅಮವ್ಯಾಸೆ ಮುಗಿಸುಕೊಂಡು ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನ ಆಳಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲು ಮಾಡಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.