ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ 2022ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರತಿ ಆಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2022ರ ಜನವರಿ 01 ರಿಂದ 2022ರ ಡಿಸೆಂಬರ್ 31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃಷಿಯಲ್ಲಿ ಪ್ರಥಮ ಮುದ್ರಣ 2022 ಎಂದು ಮುದ್ರಿತವಾಗಿರಬೇಕು. ಆಸಕ್ತರು ತಲಾ 4 ಪ್ರತಿಗಳನ್ನು ರಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟ್ರರ್ಡ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ಖುದ್ದಾಗಿ 2024ರ ಫೆಬ್ರುವರಿ 20ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: 080-22211730, 22106460 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.