ಬಾಗಲಕೋಟ: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಿಂತಿರುವ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿರುವ ಪರಿಣಾಮ ಕಾರಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ಬಾಗಲಕೋಟ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದ ಮಲ್ಲಪ್ಪ ಪೂಜಾರಿ, ಕಲ್ಲಪ್ಪ ರಾಮಪ್ಪ ಕವಟಗಿ, ಕಾಮಾಕ್ಷಿ ಬಡಿಗೇರ, ತುಕಾರಾಂ ತಳೇವಾಡ ಮೃತಪಟ್ಟಿರುವವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.