ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದೆ. ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ ಎಂಬವರಿಗೆ ಚೂರಿಯಿಂದ ಇರಿಯಲಾಗಿದ್ದು, ಯಮನೂರಿ ಚುಂಗಿನ ಎಂಬವರಿಗೂ ಗಾಯವಾಗಿದೆ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾರುಕಟ್ಟೆಯಲ್ಲಿ ಒಂದು ಕೋಮಿನವರಿಗೆ ಸೇರಿದ ತರಕಾರಿ ಚೆಲ್ಲಿದ್ದಲ್ಲದೆ ಎರಡು ತಳ್ಳುಗಾಡಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ ಐದು ಬೈಕ್ಗಳು ಜಖಂಗೊಂಡಿವೆ. ಈ ಗುಂಪು ಘರ್ಷಣೆಯಿಂದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆರೂರು ಪಟ್ಟಣದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ. ಪೊಲೀಸರು ಹರಸಾಹಸದಿಂದ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬಿಗಿ ಬಂದೋಬಸ್ತ್ಗೆ ಏರ್ಪಾಡು ಮಾಡಲಾಗಿದೆ. ಅಲ್ಲದೇ, ಜಿಲ್ಲಾಧಿಕಾರಿ ಪಿ. ಸುನೀಲಕುಮಾರ 144 ಜಾರಿಗೊಳಿಸಿ ಆದೇಶ ಮಾಡಿದ್ದಾರೆ.