ವಿಜಯಪುರ: ಲಾರಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಆಟೋಗೆ ಡಿಕ್ಕಿಯಾಗಿರುವ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಗೋಳಗುಮ್ಮಟ್ ರಸ್ತೆಯಲ್ಲಿ ನಡೆದಿದೆ. ಆಟೋದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ನಾಲ್ವರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಕ್ಕೆ ಲಾರಿ ನಂಬರ KA 05 AA 3233 ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.