ವಿಜಯಪುರ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ.
ಇನ್ನು ಕೆಎ 28 ಡಿ 9761 ವಾಹನದಲ್ಲಿ ಅಕ್ರಮವಾಗಿ 1.70 ಲಕ್ಷ ಮೌಲ್ಯದ 7400 ಕೆಜಿಯ ಅಕ್ಕಿಯ ಪಾಕೇಟ್ ಸಾಗಾಟದ ವೇಳೆಯಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.