ವಿಜಯಪುರ: ಆಕಸ್ಮಿಕ ವಿದ್ಯುತ್ ತಂತಿ ಸ್ಪರ್ಶವಾಗಿದ್ದರಿಂದ 17 ಕುರಿಗಳು ಮೃತಪಟ್ಟ ಘಟನೆ ಸಿಂದಗಿ ತಾಲೂಕಿನ ಡಂಬಳ ತಾಂಡಾದ ತೋಟದಲ್ಲಿ ನಡೆದಿದೆ. ಕಾಂತವ್ವ ರಾಠೋಡ ಎಂಬುವರಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.