ವಿಜಯಪುರ: ಆಟವಾಡುವ ವೇಳೆ ಬಾಲಕ ಕೃಷಿ ಹೊಂಡದಲ್ಲಿ ಬಿದ್ದು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. 6 ವರ್ಷದ ಖುಷಾಲ್ ಹಾಲ್ಯಾಳ ಮೃತಪಟ್ಟ ಬಾಲಕ. ಜಮೀನಿನಲ್ಲಿ ಆಟವಾಡುತ್ತಿದ್ದಾಗ ಕೃಷಿ ಹೊಂಡಕ್ಕೆ ಬಿದ್ದು ಅಸುನೀಗಿದ್ದಾನೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.