ಮೈಸೂರು: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಿಲ ಸೋರಿಕೆಯಿಂದ ಮೃತಪಟ್ಟಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಯರಗನಹಳ್ಳಿಯಲ್ಲಿ ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತರು. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ, ಪರಿಶೀಲನೆ ನಡೆಸಿದರು. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.