ವಿಜಯಪುರ: ಭೀಮಾತೀರದಲ್ಲಿ ಗುಂಡಿನ ದಾಳಿ ನಡೆದಿದೆ. ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ನೀವರಗಿ ರಸ್ತೆ ಬಳಿ
ಅಶೋಕ ಮಲ್ಲಪ್ಪ ಗಂಟಗಲ್ಲಿ ಮೇಲೆ ಗುಂಡಿನ ದಾಳಿ ನಡೆದಿದೆ. ಮನೆಯ ಬಳಿ ಇದ್ದಾಗ ಅಪರಿಚಿತರು ದುಷ್ಕರ್ಮಿಗಳು ರೌಡಿ ಶೀಟರ್ ಆಗಿದ್ದ ಅಶೋಕ
ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ದಾಳಿ ಮಾಡಿದ್ದಾರೆ. ಅಶೋಕ ಬೆನ್ನಿಗೆ ತಾಗಿದ ಮೂರಕ್ಕೂ ಅಧಿಕ ಗುಂಡಿಗಳಿಂದ ಸ್ಥಳದಲ್ಲೇ ಅಶೋಕ ಅಸುನೀಗಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರ ಬಂದಿದ್ದನು. ಇತನ ಮೇಲೆ ಕೊಲೆ ಹಾಗೂ ಇತರೆ ಕೇಸ್ ಗಳಿದವು. ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಆಗಿದ್ದಾರೆ. ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.