ಹಾಸನ:
ಜಿಲ್ಲೆಯಲ್ಲಿ ಹೊಳೆನರಸೀಪುರ ತಾಲ್ಲೂಕಿನ, ದೊಡ್ಡಳ್ಳಿ ಗ್ರಾಮದಲ್ಲಿ ಮತ್ತೋರ್ವ ಬಾಲಕಿ ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದು ಒಟ್ಟು ಮೃತರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಈ ಮೂಲಕ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಸಾವಿಗಿಡಾದ ಬಾಲಕಿ ಸಮೃದ್ಧಿ (8) ಎಂದು ಗುರುತಿಸಲಾಗಿದೆ. ಬಾಲಕಿ ಗ್ರಾಮದ ರಮೇಶ್-ಅಶ್ವಿನಿ ದಂಪತಿಯ ಪುತ್ರಿಯಾಗಿದ್ದು, ಕಳೆದ 4 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಬಾಲಕಿಯನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮೈಸೂರಿನ ಅಪೋಲೊ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಇದೀಗ ಸಾವಿಗೀಡಾಗಿದ್ದಾಳೆ ಎನ್ನಲಾಗಿದೆ.