ವಿಜಯಪುರ: ಜಿಲ್ಲೆಯ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಅದೃಷ್ಠವಶ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳಪೆ ಬಾಯ್ಲರ್ ನಿರ್ಮಾಣದಿಂದ ಸ್ಪೋಟ ಸಂಭವಿಸಿದೆ ಎಂದು ರೈತರು ಆರೋಪಿಸಿದ್ದರು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿ ಕಾರ್ಖಾನೆಯಲ್ಲಿ ಘಟನೆ ನಡೆದಿದೆ.