ಬೆಂಗಳೂರು:
ಕಾಂಗ್ರೇಸ್ ಪಕ್ಷಕ್ಕೆ ತನ್ನದೆಯಾದ ಇತಿಹಾಸ ಇದೆ ದೇಶದ ಸ್ವತಂತ್ರ ಹೋರಾಟದಿಂದಲೂ ಸದಾ ದೇಶ ದೇವೆ ಮಾಡುತ್ತಾ ಬಂದಿರುವ ಕಾಂಗ್ರೇಸ್ ಪಕ್ಷಕ್ಕೆ ಮಹಿಳಿಯರ ಅಪಾರ ಕೊಡುಗೆ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಪದಾಧಿಕಾರಿಗಳು, ಪಕ್ಷದ ಹಿರಿಯ ನಾಯಕಿಯರ ಜೊತೆ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು. ಪಕ್ಷದ ಘಟಕಗಳಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡುವಂತೆ ಕೆಲವರು ಬೇಡಿಕೆ ಇಟ್ಟಿದ್ದಾರೆ. ನಮ್ಮ ಪಕ್ಷ ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೀಸಲಾತಿ ನೀಡಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಮಹಿಳಾ ಮೀಸಲಾತಿ ತರಲು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲಾಗುವುದು. ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರನ್ನು ಪಕ್ಷದ ಭದ್ರ ಬುನಾದಿಯನ್ನಾಗಿ ಮಾಡಲಾಗುವುದು, ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ಜನರ ಭಾವನೆ ಏನಿದೆ? ನಾವು ಇಷ್ಟು ಉತ್ತಮ ಯೋಜನೆ ಕೊಟ್ಟಿದ್ದರೂ ಜನರ ನಿರೀಕ್ಷೆಗಳೇನು? ಎಂಬ ಕುರಿತು ಚರ್ಚಿಸಲು ಹಿರಿಯ ನಾಯಕಿಯರ ಸಭೆ ಕರೆಯಲಾಗಿತ್ತು. ಸುಮಾರು 40 ಮಂದಿ ನಾಯಕಿಯರು ತಮ್ಮ ಅನುಭವಗಳನ್ನು ಆಧರಿಸಿ, ಸಲಹೆ ನೀಡಿದ್ದಾರೆ ಉಪಮುಖ್ಯಮಂತ್ರಿಗಳು ಹೇಳಿದ್ದಾರೆ