ಪ್ರಸ್ತುತ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಐದು ಟಿ20 ಪಂದ್ಯಗಳು ನಡೆಯಲ್ಲಿದ್ದು, ಈಗಾಗಲೇ 3 ಪಂದ್ಯಗಳು ಮುಗಿದಿವೆ. ಇದರಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಜಿಂಬಾಬ್ವೆ ಬಳಿಕ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಭಾರತ ತಂಡ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈ ಪ್ರವಾಸಲ್ಲಿ ಆಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಭಾರತ ತಂಡ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈ ಪ್ರವಾಸಲ್ಲಿ ಆಡಲಿದೆ.
ಮೊದಲು ಟಿ20 ಸರಣಿ ನಡೆಯಲಿದೆ. ಇದಾದ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಜುಲೈ 26 ರಂದು ಪಲ್ಲೆಕೆಲೆಯಲ್ಲಿ ನಡೆಯಲಿದೆ. ಎರಡನೇ ಟಿ20 ಜುಲೈ 27 ರಂದು ಮತ್ತು ಮೂರನೇ ಪಂದ್ಯ ಜುಲೈ 29 ರಂದು ನಡೆಯಲಿದೆ. ಟಿ20 ಸರಣಿಯ ಎಲ್ಲಾ ಮೂರು ಪಂದ್ಯಗಳು ರಾತ್ರಿ 7 ಗಂಟೆಗೆ ಆರಂಭವಾಗಲಿದ್ದು, ಏಕದಿನ ಸರಣಿಯ ಮೊದಲ ಪಂದ್ಯ ಆಗಸ್ಟ್ 1 ರಂದು ನಡೆಯಲಿದೆ. ಎರಡನೇ ಪಂದ್ಯ ಆಗಸ್ಟ್ 4 ರಂದು ಮತ್ತು ಮೂರನೇ ಪಂದ್ಯ ಆಗಸ್ಟ್ 7 ರಂದು ನಡೆಯಲಿದೆ. ಈ ಮೂರು ಪಂದ್ಯಗಳು ಮಧ್ಯಾಹ್ನ 2:30ಕ್ಕೆ ಆರಂಭವಾಗಲಿವೆ.