ಬೆಂಗಳೂರು:
ರಾಜ್ಯದಲ್ಲಿ ಹಿಂದೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಜನರಿಗೆ ನೀಡಿರುವ ಭರವಸೆಗಳಾದ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದಿದ್ದು ಈ ಯೋಜನೆಗಳಿಗೆ ಸರ್ಕಾರ ಹಣ ಕ್ರೂಡಿಕರಣ ಮಾಡುವಲಿ ವಿಫಲವಾಗಿದೆ ಮತ್ತು ಎಸ್ ಸಿ ಪಿ ಮತ್ತು ಟಿಎಸ್ ಪಿ ಅನುದಾನ ಬಳಿಕೆ ಮಾಡುತ್ತಾ ಬಡವರಿಗೆ ಸೇರಬೇಕ್ಕಿದ ಹಣ ಧುರ್ಭಲಿಕೆ ವಾಗುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡುವತ್ತಿರುವ ಮಧ್ಯೆಈಗ ಕಾಂಗ್ರೇಸ್ ಮುಖಂಡರು ಹಾಗೂ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್ ಸಿಪಿ, ಟಿಎಸ್ ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡಿದ್ದು ನಿಜ ಎಂದು ಹೇಳಿದ್ದಾರೆ.ಈ ಹೇಳಿಕೆ ಈಗ ವಿರೋಧ ಪಕ್ಷದವರಿಗೆ ಟೀಕೆ ಮಾಡಲು ಮತಷ್ಟು ಅನುಕೂಲವಾಗಿದ್ದು ಸರ್ಕಾರಕ್ಕೆ ಹಿನ್ನಡೆಯಾಗಿದೆ .
ಇಲಾಖೆ ಯೋಜನೆಗಳಿಗಾಗಿ ಸಲ್ಲಿಸಿದ ಅರ್ಜಿಗಳ ಮಾಹಿತಿಯನ್ನು ಅಧಿಕಾರಿಗಳು ಕಡ್ಡಾಯವಾಗಿ ತರಬೇಕು. ಸಭೆಗೆ ಮುಂಚಿತವಾಗಿ ಎಲ್ಲಾರಿಗೂ ಸಭೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ದಾಖಲಾತಿ ಒದಗಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿದ ಅಲೆಮಾರಿಗಳ, ಅರೆ ಅಲೆಮಾರಿ ಜನನಗಳ ಅಂಕಿ ಅಂಶಗಳನ್ನು ಮಾಹಿತಿಗಾಗಿ ಸಂಗ್ರಹಿಸಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಕೆಲವು ಬ್ಯಾಂಕ್ ಸಾಲ ಸೌಲಭ್ಯ ನೀಡುವುದಿಲ್ಲ ಅಂತಹ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಂದ ನಿರ್ದೇಶನ ನೀಡುವಂತೆ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಿಳಿಸಿದರು.